ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲಾಗದು: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರಕಾರ

Update: 2021-01-22 18:29 GMT

ಹೊಸದಿಲ್ಲಿ, ಜ. 22: ಕಳೆದ ವರ್ಷ ಯುಪಿಎಸ್‌ಸಿ ನಡೆಸಿದ ಪರೀಕ್ಷೆಯಲ್ಲಿ ಕೊರೋನ ಸಾಂಕ್ರಾಮಿಕ ರೋಗದ ಕಾರಣದಿಂದ ಕೊನೆಯ ಪ್ರಯತ್ನಕ್ಕೆ ಹಾಜರಾಗಲು ಸಾಧ್ಯವಾಗದ ನಾಗರಿಕ ಸೇವಾ ಪರೀಕ್ಷೆಯ ಆಕಾಂಕ್ಷಿಗಳಿಗೆ ಇನ್ನೊಂದು ಹೆಚ್ಚುವರಿ ಅವಕಾಶಗಳನ್ನು ನೀಡುವ ಒಲವು ಇಲ್ಲ ಎಂದು ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸಿಬ್ಬಂದಿ ಹಾಗೂ ತರಬೇತಿ ಇಲಾಖೆ (ಡಿಒಪಿಟಿ) ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರ ಪ್ರತಿಪಾದನೆಯನ್ನು ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಪರಿಶೀಲನೆ ನಡೆಸಿತು. ‘‘ಇನ್ನೊಂದು ಅವಕಾಶ ನೀಡಲು ನಾವು ಸಿದ್ಧರಿಲ್ಲ. ಅಫಿಡವಿಟ್ ಸಲ್ಲಿಸಲು ಸಮಯಾವಕಾಶ ನೀಡಿ’’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಹಾಗೂ ಕೃಷ್ಣ ಮುರಳಿ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ. ನಾಗರಿಕ ಸೇವಾ ಪರೀಕ್ಷೆಯ ಆಕಾಂಕ್ಷಿ ರಚನಾ ಸಿಂಗ್ ಅವರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ನ್ಯಾಯಪೀಠ ಈಗ ಜನವರಿ 25ಕ್ಕೆ ಮುಂದೂಡಿದೆ. ಅಲ್ಲದೆ, ಈ ಅವಧಿಯ ಒಳಗಡೆ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News