ಸುರತ್ಕಲ್ : ಅಗರಿ ಎಂಟರ್ ಪ್ರೈಸಸ್ ನಲ್ಲಿ ಅಗ್ನಿ ಅವಘಡ

Update: 2021-01-22 19:03 GMT

ಮಂಗಳೂರು : ಸುರತ್ಕಲ್ ನಲ್ಲಿರುವ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆ 'ಅಗರಿ ಎಂಟರ್ ಪ್ರೈಸಸ್' ನಲ್ಲಿ ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬೆಂಕಿ ಅವಘಡದಿಂದ ಅಪಾರ ಪ್ರಮಾಣದ ಸೊತ್ತುಗಳು ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಅಗ್ನಿ ಶಾಮಕದಳದ 3 ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುತ್ತಿವೆ. ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News