ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ, ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಿ: ಯಡಿಯೂರಪ್ಪ

Update: 2021-01-23 14:06 GMT

ಮೈಸೂರು,ಜ.23: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ, ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿ ಸಕ್ರಮಗೊಳಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶನಿವಾರ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ದೊಡ್ಡ ಪ್ರಮಾಣದಲ್ಲಿ ರಾಷ್ಟ್ರೀಯ ಹೆದ್ದಾರಿ, ರಸ್ತೆಗಳು ಸೇರಿದಂತೆ ಇನ್ನಿತರೆ ಕೆಲಸ ಕಾಮಗಾರಿಗಲು ಕಾರ್ಯಗಳು ನಡೆಯುತ್ತಿರುವುದರಿಂದ ಗಣಿಗಾರಿಕೆ ಆಗಲೇಬೇಕು. ಅಕ್ರಮ ಗಣಿಗಾರಿಕೆ ಎಲ್ಲೇ ನಡೆದರೂ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗೆ ಸೂಚನೆ ನಿಡಿದ್ದೇನೆ. ಯಾರು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಅವರು ಲೈಸೆನ್ಸ್ ಪಡೆದು ಮಾಡಬೇಕು ಎಂದರು.

ಯಾರು ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೊ ಅವರು ಕೂಡಲೇ ಅರ್ಜಿ ಹಾಕಿ ಸಕ್ರಮಗೊಳಿಸಿಕೊಳ್ಳಬೇಕು. ಇದರಲ್ಲಿ ನಮ್ಮದೇನು ಅಭ್ಯಂತರವಿಲ್ಲ, ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅನುಮತಿ ನೀಡಬೇಕೊ ಇಲ್ಲವೋ ಎಂದು ತೀರ್ಮಾನಿಸುತ್ತಾರೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ನಡೆದ ದುರ್ಘಟನೆ ಸ್ಥಳಕ್ಕೆ ನಾನು ಭೇಟಿ ನೀಡಿ ಅದು ಅಕ್ರಮ ಗಣಿಗಾರಿಕೆಯೋ ಎಂದು ಪರಿಶೀಲನೆ ನಡೆಸುತ್ತೇನೆ. ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಅಲ್ಲಿನ ಅಕ್ಕ ಪಕ್ಕದ ಮನೆಗಳಿಗೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದ್ದು, ಅವರಿಗೂ ಸೂಕ್ತ ಪರಿಹಾರ ನೀಡುವುದಾಗಿ ಹೇಳಿದರು. 

ಈ ಬಾರಿಕ ಕೋವಿಡ್‍ನಿಂದಾಗಿ ಆರ್ಥಿಕವಾಗಿ ತೊಂದರೆಯಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಕಡಿತಗೊಳ್ಳಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News