ಹುಣಸೋಡು ದುರ್ಘಟನೆ ; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಚಿವ ಮುರುಗೇಶ್ ನಿರಾಣಿ

Update: 2021-01-23 07:38 GMT

ಶಿವಮೊಗ್ಗ :  ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು.

ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ ಅನಧಿಕೃತವಾಗಿತ್ತೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಆದಷ್ಟು ಬೇಗನೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಲೋಪದೋಷಗಳನ್ನು ಪತ್ತೆಹಚ್ಚಲಾಗುವುದು. ಗಣಿಗಾರಿಕೆಗೆ ಸ್ಫೋಟಕ ಎಲ್ಲಿಂದ ಬಂತು, ಇದಕ್ಕೆ ಪರವಾನಿಗೆ ಇತ್ತೆ, ಸ್ಫೋಟಕ ಸಾಗಣಿಕೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಎಂಬ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News