ಹುಣಸೋಡು ದುರಂತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

Update: 2021-01-23 12:47 GMT

ಶಿವಮೊಗ್ಗ, ಜ.23: ಹುಣಸೋಡು ಕಲ್ಲುಕ್ವಾರೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಇದುವರೆಗೆ 6 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಲ್ಲಿ ಸ್ಫೋಟಕದ ಬಳಕೆ, ಅದು ಎಲ್ಲಿಂದ ಬಂತು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಹುಣಸೋಡು ದುರಂತ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹೈದರಬಾದ್‍ನಿಂದ ಆಗಮಿಸಿದ ಡೈರೆಕ್ಟರ್ ಆಫ್ ಎಕ್ಸ್‍ಪ್ಲೋಸಿವ್ಸ್ ತಂಡ ಈಗಾಗಲೇ ಪ್ರಾಥಮಿಕ ತನಿಖೆಯನ್ನು ಕೈಗೊಂಡಿದೆ. ಸ್ಥಳೀಯವಾಗಿ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಘಟನೆಯ ತನಿಖೆಯನ್ನು ನಡೆಸುತ್ತಿದೆ. ದುರ್ಘಟನೆಯಲ್ಲಿ ಸಾವಿಗೀಡಾದ ಮೃತರ ಕುಟುಂಬಗಳಿಗೆ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದರು.

ಈ ಪ್ರದೇಶದಲ್ಲಿರುವ ಎಲ್ಲಾ ಕ್ರಶರ್ ಗಳು ಪರವಾನಿಗೆ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ. ಆದರೆ ಇಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ಇರುವುದಿಲ್ಲ. ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಈ ಕುರಿತು ಸರ್ಕಾರ ಮರು ಪರಿಶೀಲನೆ ನಡೆಸಲಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. ನಿಷ್ಪಕ್ಷವಾದ ತನಿಖೆಯಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News