ತಂತ್ರಜ್ಞಾನವು ನಮ್ಮ ಜೀವನದ ಅವಿಭಾಜ್ಯ ಅಂಗ: ಸೋದೆ ಶ್ರೀ

Update: 2021-01-23 13:23 GMT

ಉಡುಪಿ, ಜ.23: ನಮ್ಮ ಜೀವನದಲ್ಲಿ ತಂತ್ರ ಜ್ಞಾನವು ಅವಿಭಾಜ್ಯ ಅಂಗವಾಗಿದೆ. ಹಾಗಾಗಿ ಉತ್ತಮ ತಂತ್ರಜ್ಞರಿಗೆ ಬೇಡಿಕೆಯಿದೆ ಎಂದು ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ 2019-20ರ ಸಾಲಿನ ವಾರ್ಷಿಕ ಮಹಾಸಭೆ, ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದಾ್ಘಟಿಸಿ ಅವರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ್ ಪ್ರಭು ಮಾತನಾಡಿ, ದ್ವಿತೀಯ ಪದವಿ ಪೂರ್ವ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಿ ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಭಗವಂತ ಕಟ್ಟಿಮನಿ ಮಾತನಾಡಿದರು. ಅಧ್ಯಕ್ಷತೆಯನ್ನು ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ವಹಿಸಿದ್ದರು. ವಿದ್ಯಾರ್ಥಿಗಳ ಕಲ್ಯಾಣ ನಿಧಿ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು. ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಪಾ್ರಂಶುಪಾಲರನ್ನು ಸನ್ಮಾನಿಸಲಾಯಿತು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಇನ್ನಂಜೆ ಶ್ರೀವಿಷ್ಣುಮೂರ್ತಿ ಹಯವದನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎ.ಪಿ.ಕೊಡಂಚ ವಂದಿಸಿದರು. ಬಳಿಕ ಪ್ರಾಂಶುಪಾಲರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News