ಉಡುಪಿ ಜಿಲ್ಲೆಯಲ್ಲಿ ಶನಿವಾರ 10 ಮಂದಿಗೆ ಕೊರೋನ ಪಾಸಿಟಿವ್

Update: 2021-01-23 13:29 GMT

ಉಡುಪಿ, ಜ.23: ಜಿಲ್ಲೆಯ ಒಟ್ಟು 10 ಮಂದಿ ಶನಿವಾರ ಕೋವಿಡ್- 19ಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಏಳು ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 30 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರು ಹಾಗೂ ಆರು ಮಂದಿ ಮಹಿಳೆಯರು. ಇವರಲ್ಲಿ ಎಂಟು ಮಂದಿ ಉಡುಪಿ ತಾಲೂಕಿನವರಾದರೆ ತಲಾ ಒಬ್ಬರು ಕುಂದಾಪುರ ಮತ್ತು ಕಾರ್ಕಳ ತಾಲೂಕಿನವರು. ಶುಕ್ರವಾರ ಏಳು ಮಂದಿ ಸೋಂಕಿನಿಂದ ಮುಕ್ತರಾಗುವ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಕೊರೋನ ದಿಂದ ಗುಣಮುಖರಾದವರ ಒಟ್ಟು ಸಂಖ್ಯೆ ಈಗ 23,035ಕ್ಕೇರಿದೆ.

ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರು ಹಾಗೂ ಆರು ಮಂದಿ ಮಹಿಳೆಯರು. ಇವರಲ್ಲಿ ಎಂಟು ಮಂದಿ ಉಡುಪಿ ತಾಲೂಕಿನವರಾದರೆ ತಲಾ ಒಬ್ಬರು ಕುಂದಾಪುರ ಮತ್ತು ಕಾರ್ಕಳ ತಾಲೂಕಿನವರು. ಶುಕ್ರವಾರ ಏಳು ಮಂದಿ ಸೋಂಕಿನಿಂದ ಮುಕ್ತರಾಗುವ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಕೊರೋನ ದಿಂದ ಗುಣಮುಖರಾದವರ ಒಟ್ಟು ಸಂಖ್ಯೆ ಈಗ 23,035ಕ್ಕೇರಿದೆ.

1026 ಮಂದಿ ನೆಗೆಟಿವ್: ಶುಕ್ರವಾರ ಜಿಲ್ಲೆಯ 1032 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1026 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಆರು ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,254 ಎಂದು ಡಾ.ಸೂಡ ತಿಳಿಸಿದರು.

ಶುಕ್ರವಾರ ಜಿಲ್ಲೆಯ 1032 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1026 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಆರು ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,254 ಎಂದು ಡಾ.ಸೂಡ ತಿಳಿಸಿದರು. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,28,215 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,04,961 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಹೀಗಾಗಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 189 ಮಾತ್ರ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಎರಡು ದಿನ ಲಸಿಕೆ ಇಲ್ಲ: ಶನಿವಾರ ಮತ್ತು ರವಿವಾರ ಜಿಲ್ಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮವಿರುವುದಿಲ್ಲ. ಸೋಮವಾರದಿಂದ ಅದು ಮತ್ತೆ ಮುಂದುವರಿಯಲಿದೆ ಎಂದು ಡಿಎಚ್‌ಓ ತಿಳಿಸಿದರು. ಕೊರೋನ ವಿರುದ್ಧ ಹೋರಾಟದ ಭಾಗವಾಗಿ ಕಳೆದ ಜ.16ರಿಂದ ಜಿಲ್ಲೆಯಲ್ಲಿ ಪ್ರಾರಂಭಗೊಂಡ ಕೋವಿಡ್ ವಿರುದ್ಧದ ವ್ಯಾಕ್ಸಿನೇಷನ್‌ನ ಮೊದಲ ಹಂತದಲ್ಲಿ ಜಿಲ್ಲೆಯ ಒಟ್ಟು 22,103 ಮಂದಿ ಕೊರೋನ ವಾರಿಯರ್ಸ್‌ಗೆ ಲಸಿಕೆಯನ್ನು ನೀಡುವ ಗುರಿ ಇದ್ದು, ಶುಕ್ರವಾರದವರೆಗೆ ಒಟ್ಟು 4816 ಮಂದಿಗೆ (8976 ಮಂದಿಯಲ್ಲಿ) ಲಸಿಕೆಯನ್ನು ನೀಲಾಗಿದೆ ಎಂದು ಡಾ.ಸೂಡ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News