ಕೊಡಗು ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅಧಿಕಾರ ಸ್ವೀಕಾರ

Update: 2021-01-23 13:32 GMT

ಮಡಿಕೇರಿ, ಜ.23: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರು ಇಂದು ಅಧಿಕಾರ ವಹಿಸಿಕೊಂಡರು.

ಪ್ರಬಾರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭನ್ವರ್ ಸಿಂಗ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು. ಚಾರುಲತಾ ಸೋಮಲ್ ಅವರು ಈ ಹಿಂದೆ ಕೊಡಗು ಜಿ.ಪಂ.ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.

ಕಳೆದ ಎರಡು ವರ್ಷಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಇದೀಗ ಸುದೀರ್ಘ ರಜೆಯಲ್ಲಿ ತೆರಳಿರುವ ಅನೀಸ್ ಕಣ್ಮಣಿ ಜಾಯ್ ಅವರ ಸ್ಥಾನಕ್ಕೆ ಚಾರುಲತಾ ಅವರನ್ನು ಸರ್ಕಾರ ನೇಮಕ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News