ನಾನೇ ಸಿಎಂ ಎನ್ನುವ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಕ್ರಮ ಕೈಗೊಳ್ಳಲಿ: ಸಚಿವ ಈಶ್ವರಪ್ಪ

Update: 2021-01-23 14:02 GMT

ಧಾರವಾಡ, ಜ. 23: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆಯ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಆದರೆ, ಕಾಂಗ್ರೆಸ್ ಪಕ್ಷದ ಯಾರೂ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಎರಡೂವರೆ ವರ್ಷ ಬಾಕಿ ಇರುವಾಗಲೇ ಮುಂದಿನ ಸಿಎಂ ನಾನೇ ಎಂದು ಹೇಳುವ ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರಿ ಧೋರಣೆ. ಪಕ್ಷದ ಹೈಕಮಾಂಡ್ ಹಾಗೂ ಅಲ್ಲಿನ ನಾಯಕರು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವೂ ಇಲ್ಲದ ಕಾಂಗ್ರೆಸ್ ಒಂದು ಮುಳುಗುವ ಹಡಗಾಗಿದ್ದು, ಅದರಲ್ಲಿರುವ ಹಲವರು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅಲ್ಲಿಂದ ಹೊರಗೆ ಬರುತ್ತಿದ್ದಾರೆ. ಅವರಲ್ಲಿ ಹಲವರು ಬಿಜೆಪಿ ಸೇರುತ್ತಿದ್ದಾರೆ ಎಂದ ಈಶ್ವರಪ್ಪ, ನಾನೇ ಸಿಎಂ ಎನ್ನುವ ಸಿದ್ದರಾಮಯ್ಯ ವಿರುದ್ಧ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ಈಶ್ವರಪ್ಪಗೆ ಕಾನೂನು ಗೊತ್ತಿಲ್ಲ

‘ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ಸುಲಭವಾಗಿ ರದ್ದುಗೊಳಿಸಲಾಗದು. ಅದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಲಾಗದು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕಾನೂನು ಗೊತ್ತಿಲ್ಲ'

-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News