ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

Update: 2021-01-23 15:37 GMT

ಮಂಗಳೂರು, ಜ.23: ಇದೇ ಜ.24ರಂದು ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.24ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.

ಈ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲಿಯೇ ದಿನಾಂಕವನ್ನು ತಿಳಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News