ಉಳ್ಳಾಲ: ಅತ್ಯಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2021-01-23 16:02 GMT

ಉಳ್ಳಾಲ, ಒ.23: ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ, ಆಕೆಯ ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರಿಯರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕೋಟೆಕಾರ್‌ನಲ್ಲಿ ಬಂಧಿಸಿದ್ದಾರೆ.
ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಈತ ಎಸ್‌ಡಿಪಿಐ ಕಾರ್ಯಕರ್ತ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಪತಿಯಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಪುತ್ರಿಯರೊಂದಿಗೆ ವಾಸಿಸುತ್ತಿದ್ದರು. ಈ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆರೋಪಿ ಸಿದ್ದೀಕ್ ಎಂಬಾತ ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ, ಆಕೆಯ ಇಬ್ಬರು ಅಪ್ರಾಪ್ತ ವಯಸ್ಸಿನ ಪುತ್ರಿಯರಿಗೂ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದಿದೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಸಿದ್ದೀಕ್ ವಿರುದ್ಧ ಜ.16ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿಯ ವಿರುದ್ಧ ಅತ್ಯಾಚಾರ, ಪೊಕ್ಸೊ ಪ್ರಕರಣ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News