ಪೂರ್ಣ ಪ್ರಮಾಣದ ಶಾಲೆ ಆರಂಭಕ್ಕೆ ತಜ್ಞರೊಂದಿಗೆ ಚರ್ಚಿಸಿ ಕ್ರಮ: ಸಚಿವ ಸುರೇಶ್‍ ಕುಮಾರ್

Update: 2021-01-23 17:01 GMT

ವಿಜಯಪುರ, ಜ.23: ಶಾಲಾ-ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವುದರ ಬಗ್ಗೆ ಆರೋಗ್ಯ ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ನಗರದ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಹಂತದಲ್ಲಿ ದ್ವಿತೀಯ ಪಿಯು ಹಾಗೂ ಎಸೆಸೆಲ್ಸಿ ತರಗತಿಗಳನ್ನು ಈಗಿರುವ ಅರ್ಧದಿನದ ಬದಲು ದಿನವಿಡೀ ಆರಂಭಿಸಿ ಹಂತ ಹಂತವಾಗಿ ಉಳಿದ ತರಗತಿಗಳನ್ನು ಆರಂಭಿಸಲಾಗುವುದೆಂದು ತಿಳಿಸಿದ್ದಾರೆ.

ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸಿದ್ದರಿಂದ ಗ್ರಾಮೀಣ ಮಕ್ಕಳಿಗೆ ಹೆಚ್ಚಿನ ಅನುಕೂಲಗಳಾಗಿವೆ. ಶೇ.70ಕ್ಕೂ ಅಧಿಕ ಮಕ್ಕಳ ಹಾಜರಾತಿ ಕಂಡು ಬಂದಿದೆ. ನಗರ ಪ್ರದೇಶದ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ, ಪರ್ಯಾಯ ಶಿಕ್ಷಣ ಸಿಕ್ಕಂತೆ ಗ್ರಾಮೀಣರಿಗೆ ಸಿಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಶಾಲಾ. ಕಾಲೇಜು ಆರಂಭವಾಗಿದ್ದು ಅಗತ್ಯವಾಗಿತ್ತೆಂದು ಅವರು ತಿಳಿಸಿದ್ದಾರೆ.

2021-22ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಜು.1ರಿಂದ ಆರಂಭಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

-ಸುರೇಶ್‍ ಕುಮಾರ್, ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News