ಜಾಗತಿಕ ಬಂಟ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ

Update: 2021-01-23 17:26 GMT

ಮಂಗಳೂರು, ಜ.23: ಜಾಗತಿಕ ಬಂಟ ಪ್ರತಿಷ್ಠಾನದ 24ನೇ ವಾರ್ಷಿಕ ಮಹಾಸಭೆಯು ಶನಿವಾರ ನಗರದ ಹೊಟೇಲ್ ಮೋತಿ ಮಹಲ್ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಬಂಟ ಸಮಾಜದ ಜನರು ಒಗ್ಗಟ್ಟಿನಿಂದ ಸಮುದಾಯದ ಅಭಿವೃದ್ಧಿ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.

ಜಾಗತಿಕ ಬಂಟ ಪ್ರತಿಷ್ಠಾನ ಕಳೆದ 24 ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಬಡ್ಡಿ ರಹಿತ ವಿದ್ಯಾಭ್ಯಾಸ ಸಾಲ ಮತ್ತು ಬಡ ಕುಟುಂಬದ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಪ್ರತಿವರ್ಷ 250 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ವೈದ್ಯಕೀಯ ನೆರವು, ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿದೆ. ಭವಿಷ್ಯದಲ್ಲಿ ರಕ್ತದಾನ ಶಿಬಿರದಂತಹ ಯೋಜನೆಗಳನ್ನು ಹಮ್ಮಿಕೊಳ್ಳುವ ಯೋಚನೆಯಿದೆ. ಪ್ರತಿಷ್ಠಾನದ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡುವ ಜತೆಗೆ ಹೆಚ್ಚು ಮಂದಿ ಸದಸ್ಯರಾಗಿ ಸೇರ್ಪಡೆಗೊಳ್ಳಬೇಕು ಎಂದರು.

ಪ್ರತಿಷ್ಠಾನ ಉಪಾಧ್ಯಕ್ಷ ಡಾ. ಶಾಂತಾರಾಮ ಶೆಟ್ಟಿ, ಪ್ರತಿಷ್ಠಾನದ ಪೋಷಕ ಡಾ. ಬಿ.ಆರ್. ಶೆಟ್ಟಿ ಮಾತನಾಡಿದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸಿಎ ವೈ. ಸುಧೀರ್ ಕುಮಾರ್ ಶೆಟ್ಟಿ ವರದಿ ವಾಚಿಸಿದರು. ಯೋಜನಾ ನಿರ್ದೇಶಕ ಡಾ. ಸಂಜೀವ ರೈ ಮುಂದಿನ ಯೋಜನೆಗಳ ವಿವರ ನೀಡಿದರು. ಕೋಶಾಧಿಕಾರಿ ಸಿಎ ಪಿ. ರಘುಚಂದ್ರ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಈ ಸಂದರ್ಭ ಹಲವರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಉಪಾಧ್ಯಕ್ಷ ಕೆ. ಸಚ್ಚಿದಾನಂದ ಹೆಗ್ಡೆ, ಲೆಕ್ಕಪರಿಶೋಧಕ ಎಚ್.ಆರ್. ಶೆಟ್ಟಿ ಉಪಸ್ಥಿತರಿದ್ದರು.

ಜಾಗತಿಕ ಬಂಟ ಪ್ರತಿಷ್ಠಾನ ವತಿಯಿಂದ ಡಾ.ಡಿ.ಕೆ.ಚೌಟ ದತ್ತಿನಿಧಿ ಮೂಲಕ ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಬಡಗು ತಿಟ್ಟಿನ ಪ್ರಸಿದ್ಧ ಸೀವೇಷಧಾರಿ ರಾಜೀವ ಶೆಟ್ಟಿ ಹೊಸಂಗಡಿಗೆ ನೀಡಲಾಯಿತು. ಪ್ರಶಸ್ತಿ 25 ಸಾವಿರ ರೂ. ನಗದು ಒಳಗೊಂಡಿತ್ತು.

ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ ಸನ್ಮಾನ ಪತ್ರ ವಾಚಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾದ ಪ್ರೊ.ಜಿ.ಆರ್. ರೈ, ಪಳ್ಳಿ ಕಿಶನ್ ಹೆಗ್ಡೆ ಉಪಸ್ಥಿತರಿದ್ದರು.

►ಸಿಎ ಪರೀಕ್ಷೆಯಲ್ಲಿ 16ನೇ ಸ್ಥಾನ ಗಳಿಸಿದ ಸಿಎ ನಿಹಾಲ್ ರೈ ಅವರನ್ನು ದಿ. ಸಿಎ ವೈ.ಆರ್. ಶೆಟ್ಟಿ ದತ್ತನಿಧಿಯಿಂದ ಸನ್ಮಾನಿಸಲಾಯಿತು.
ಸಿಎ ಸುದೇಶ್ ಕುಮಾರ್ ರೈ ಸನ್ಮಾನಪತ್ರ ವಾಚಿಸಿದರು. ಕಳ್ಳಿಗೆ ತಾರಾನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News