ಎಫ್ ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ಸಂಖ್ಯೆ 14ಕ್ಕೆ ಏರಿಕೆ

Update: 2021-01-24 08:14 GMT
ಸಂದೀಪ್ ಪಾಟೀಲ್

ಬೆಂಗಳೂರು, ಜ.24: ಇಂದು (ಜ.24) ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ಮೂಲಕ ನಡೆಬೇಕಿದ್ದ ಪ್ರಥಮ ದರ್ಜೆ ಸಹಾಯಕ (ಎಫ್'ಡಿಎ)  ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಪ್ರಕರಣದ ಮುಖ್ಯ ಸೂತ್ರಧಾರ ಚಂದ್ರು, ರಾಚಪ್ಪ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದ್ದು, ಇವರಿಂದ    ರೂ.35 ಲಕ್ಷ ನಗದು ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ. ಬಂಧಿತರು ನೀಡಿರುವ ಮಾಹಿತಿಯನ್ನು ಆಧರಿಸಿ, ಮತ್ತಷ್ಟು ಆರೋಪಿಗಳ ಬಂಧನಕ್ಕೆ ಸಿಸಿಬಿ ಪೊಲೀಸರು ಬೀಸಿದ್ದಾರೆ ಎಂದವರು ತಿಳಿಸಿದ್ದಾರೆ.

ಆರೋಪಿಗಳು ಆನ್ ಲೈನ್ ಮೂಲಕ ಜಿಲ್ಲಾವಾರು ಪ್ರಶ್ನೆಪತ್ರಿಕೆ ಸೋರಿಕೆ ಮಾಡಿರುವ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆ. ಇನ್ನು, ಬಂಧಿತರಿಗೆ ಹೇಗೆ ಪ್ರಶ್ನೆ ಪತ್ರಿಕೆ ದೊರೆತಿದೆ ಎನ್ನುವ ಆಯಾಮದ ಕುರಿತು ತನಿಖೆ ತೀವ್ರಗೊಳಿಸಲಾಗಿದೆ. ಇಡೀ ಪ್ರಕರಣವನ್ನು ಗಂಭೀರ ಪ್ರಕರಣವೆಂದು ಪರಿಗಣಿಸಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News