ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Update: 2021-01-24 12:50 GMT

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಇಂದು ನಿಟ್ಟೂರು ಬಾಲಕಿಯರ ಬಾಲಮಂದಿರದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪುಟಾಣಿ ಮಕ್ಕಳೊಂದಿಗೆ ಗಿಡಕ್ಕೆ ನೀರು ಸುರಿಯುವ ಮೂಲಕ ಉದ್ಘಾಟಿಸಿದ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ, ಮಕ್ಕಳ ಬಾಯಿಗೆ ಜೇನು ತುಪ್ಪಹಾಕಿ ಮಕ್ಕಳ ಭವಿಷ್ಯ ಸಿಹಿ ಯಾಗಿರಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಆರ್.ಶೇಷಪ್ಪ ಮಾತನಾಡಿ, ಮಕ್ಕಳ ರಕ್ಷಣೆ, ಪೋಷಣೆ ಹಾಗೂ ಸರಕಾರದ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗುವುದು ಎಂದು ತಿಳಿಸಿದರು.

ಮುಖ್ಯ ಅಥಿತಿಯಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ಮಕ್ಕಳ ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಬಾಲ್ಯವಿವಾಹ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು. ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ಸುಮತಿ, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯ, ಮಹಿಳಾ ಶಕ್ತಿ ಕೇಂದ್ರದ ಮಹಿಳಾ ಕಲ್ಯಾಣಾಧಿಕಾರಿ ದೀಪಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಉಪಸ್ಥಿತರಿದ್ದರು.

ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್.ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಶಕ್ತಿ ಕೇಂದ್ರದ ಸಂಯೋಜಕಿ ಶಾರದಾ ಸ್ವಾಗತಿಸಿದರು. ಅನುಷಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News