ಉಡುಪಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Update: 2021-01-24 12:53 GMT

ಉಡುಪಿ, ಜ.24: ಉಡುಪಿ ನಗರದ ಬೋರ್ಡ್ ಹೈಸ್ಕೂಲ್ನಲ್ಲಿ ರವಿವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿದ್ಯಾಂಗ ಉಪನಿರ್ದೇಶಕ ಎನ್.ಎಚ್. ನಾಗೂರ, ಭಾರತದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಸಮಸ್ಯೆ, ರಕ್ಷಣೆ, ಆರೋಗ್ಯ ಶಿಕ್ಷಣ, ಸಮಾನೆ ಅವಕಾಶಗಳ ಕುರಿತು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಂಗೀತ, ನೃತ್ಯ, ಭಾಷಣ ಮತ್ತು ಆಟೋಟ ಸ್ಪರ್ಧೆಗಳನ್ನು ದೈಹಿಕ ಶಿಕ್ಷಕಿ ಸೌಮ್ಯ ಅಮೀನ್ ನಡೆಸಿದರು.

ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕಿ ಶಾಂತಿ ಪೈ ಕಾರ್ಯಕ್ರಮ ನಿರೂಪಿಸಿದರು. ಸತ್ಯಶಂಕರ್ ರಾವ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News