ದ.ಕ.: ಕೋವಿಡ್ಗೆ ಓರ್ವ ಬಲಿ; 42 ಮಂದಿಗೆ ಪಾಸಿಟಿವ್
Update: 2021-01-24 17:19 GMT
ಮಂಗಳೂರು, ಜ.24: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೋರ್ವ ಬಲಿಯಾಗಿದ್ದು, 42 ಮಂದಿಗೆ ರವಿವಾರ ಹೊಸದಾಗಿ ಸೋಂಕು ತಗುಲಿದೆ. ಈ ನಡುವೆ 26 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿನ 33,603 ಸೋಂಕಿತರ ಪೈಕಿ 32,584 ಮಂದಿ ಕೊರೋನದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 739 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 27,047 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 28,33,365 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.