ಉತ್ತರಪ್ರದೇಶ: ಮಹಿಳೆಯ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

Update: 2021-01-24 18:56 GMT

ಲಕ್ನೊ, ಜ.24: ಉತ್ತರಪ್ರದೇಶದ ಬದೌನ್‌ನಲ್ಲಿ ಶುಕ್ರವಾರ 20 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ರವಿವಾರ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ ರಾತ್ರಿ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ವ್ಯಕ್ತಿಯೊಬ್ಬ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮನೆಗೆ ಮರಳಿದ ಬಳಿಕ ಮಹಿಳೆ ಮನೆಯವರಲ್ಲಿ ವಿಷಯ ತಿಳಿಸಿದ್ದು, ಅವರು ತಕ್ಷಣ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದೂರಿನ ಆಧಾರದಲ್ಲಿ 20 ವರ್ಷದ ಯುವಕನ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬದೌನ್‌ನ ಹಿರಿಯ ಪೊಲೀಸ್ ಅಧೀಕ್ಷಕ ಸಂಕಲ್ಪ ಶರ್ಮ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News