ಜ.27ರಂದು ‘ಮಣ್ಣಿನೊಳಗಿನ ಅನ್ನ’ ಕೃತಿ ಬಿಡುಗಡೆ

Update: 2021-01-25 08:10 GMT

ಮಂಗಳೂರು,ಜ.25: ಸಿರಿ ಪ್ರಕಾಶನ ಪಾವಂಜೆ ಮತ್ತು ಆಕೃತಿ ಆಶಯ ಪಬ್ಲಿಕೇಷನ್ಸ್ ಆಶ್ರಯದಲ್ಲಿ ಡಾ.ಗಣೇಶ್ ಅಮೀನ್ ಸಂಕಮಾರ್ ಅವರ ಆತ್ಮಕಥನ ‘ಮಣ್ಣಿನೊಳಗಿನ ಅನ್ನ’ ಕೃತಿ ಬಿಡುಗಡೆ ಕಾರ್ಯಕ್ರಮವು ಜ.27ರಂದು ಸಂಜೆ 6 ಗಂಟೆಗೆ ಪಾವಂಜೆ ಸಿರಿಮನೆಯ ಅನುಭವ ಮಂಟಪದಲ್ಲಿ ಜರುಗಲಿದೆ ಎಂದು ಯಕ್ಷಗಾನ ಅಕಾಡಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಳು-ಕನ್ನಡ ವಿದ್ವಾಂಸ ಪ್ರೊ.ಬಿ.ಎ. ವಿವೇಕ ರೈ ಕೃತಿ ಬಿಡುಗಡೆಗೊಳಿಸಲಿದ್ದು, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಕಡಂಬೋಡಿ ಮಹಾಬಲ ಪೂಜಾರಿ, ಡಾ.ರಾಧಾಕೃಷ್ಣ ಕೆ.ಶಾಸ್ತ್ರಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಕೃತಿ ಆಶಯ ಪಬ್ಲಿಕೇಷನ್ಸ್ ಮುಖ್ಯಸ್ಥ ಕಲ್ಲೂರು ನಾಗೇಶ, ಸಿರಿ ಪ್ರಕಾಶನ ಸದಸ್ಯ ಮಧುಕರ ಅಮೀನ್, ಡಾ.ಗಣೇಶ ಅಮೀನ್ ಸಂಕಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News