ನಟಿ, ಬಿಗ್​ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ

Update: 2021-01-25 14:06 GMT

ಬೆಂಗಳೂರು, ಜ.25: ಕನ್ನಡ ಚಿತ್ರರಂಗದ ನಟಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸದ್ಯ ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾದ ಜಯಶ್ರೀ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಉಪ್ಪು ಹುಳಿ ಖಾರ ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಇವರು, ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದರು.

ಈ ಹಿಂದೆ ಆಸ್ತಿ ವಿಚಾರಕ್ಕೆ ಸಂಬಂಧ ಜಯಶ್ರೀ ಸೋದರ ಮಾವ ಕತ್ರಿಗುಪ್ಪೆಯ ಮನೆಯಲ್ಲಿ ದೈಹಿಕವಾಗಿ ಥಳಿಸಿದ್ದಲ್ಲದೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾಗಿ ಆರೋಪಿಸಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಗೆ ಆಕೆ ದೂರು ನೀಡಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News