ಉಡುಪಿ ಜಿಲ್ಲೆಯಲ್ಲಿ 2074 ಮಂದಿಗೆ ಕೋವಿಡ್ ಲಸಿಕೆ

Update: 2021-01-25 13:19 GMT

ಉಡುಪಿ, ಜ.25: ಸೋಮವಾರ ವೈದ್ಯರೂ ಸೇರಿದಂತೆ 4420 ಮಂದಿ ಆರೋಗ್ಯ ಕಾರ್ಯಕರ್ತರಲ್ಲಿ 2074 ಮಂದಿ ಕೊರೋನಾ ವಿರುದ್ಧದ ‘ಕೊವಿಶೀಲ್ಡ್’ ಲಸಿಕೆ ಪಡೆದಿದ್ದಾರೆ. ಇದು ದಿನದ ನಿಗದಿತ ಗುರಿಯ ಶೇ.46.9ರಷ್ಟು ಸಾಧನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಕೋವಿಡ್ ವಿರುದ್ಧದ ವ್ಯಾಕ್ಸಿನೇಷನ್‌ನ ಮೊದಲ ಹಂತದಲ್ಲಿ ಜಿಲ್ಲೆಯ ಒಟ್ಟು 22,103 ಮಂದಿ ಕೊರೋನಾ ವಾರಿಯರ್ಸ್‌ಗೆ ಲಸಿಕೆಯನ್ನು ನೀಡುವ ಗುರಿ ಇದೆ. ಇದುವರೆಗೆ ಲಸಿಕೆ ಪಡೆಯಬೇಕಿದ್ದ 13,396 ಮಂದಿಯಲ್ಲಿ 6890 ಮಂದಿ ಮಾತ್ರ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಈ ಮೂಲಕ ಶೇ.51.4ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News