ರಾಜ್ಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಫರ್ಧೆ : ಮಂಗಳೂರು ವಿವಿಗೆ 3 ಪ್ರಶಸ್ತಿ

Update: 2021-01-25 16:36 GMT

ಮಂಗಳೂರು, ಜ.25: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಚಿತ್ರದುರ್ಗದಲ್ಲಿ ಇತ್ತೀಚೆಗೆ ರಾಜ್ಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಫರ್ಧೆ ನಡೆಯಿತು.

ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿನಿಯರಾದ ಸೌಜನ್ಯ- ರಸಾಯನಶಾಸ್ತ್ರ (ಪ್ರಥಮ ಸ್ಥಾನ), ಶುಭಶ್ರೀ ಎಸ್. ಶೆಣೈ-ಭೌತಶಾಸ್ತ್ರ (ಪ್ರಥಮ) ಹಾಗೂ ಕಾರ್ಕಳದ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿ ಕೀರ್ತಿ ಗೋಖಲೆ-ಜೀವವಿಜ್ಞಾನದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯದ ಎಲ್ಲ 11 ವಿಶ್ವವಿದ್ಯಾನಿಲಯಗಳ ಪ್ರಥಮ ಹಾಗೂ ದ್ವಿತೀಯ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News