ಜ.28ಕ್ಕೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2021-01-25 18:32 GMT

ಬೆಂಗಳೂರು, ಜ. 25: ಇದೇ 28ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಜಂಟಿ ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜ.28ರ ಗುರುವಾರ ಬೆಳಗ್ಗೆ 9ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ-101ರಲ್ಲಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಹಾಗೂ ಸಲೀಂ ಅಹ್ಮದ್ ಪಾಲ್ಗೊಳ್ಳಲಿದ್ದಾರೆ.

ಪಕ್ಷದ ಎಲ್ಲ ಶಾಸಕರು, ಮೇಲ್ಮನೆ ಸದಸ್ಯರು ಸಭೆಗೆ ಹಾಜರಾಗಿ ಜಂಟಿ ಅಧಿವೇಶನದಲ್ಲಿ ಪಕ್ಷ ಯಾವ್ಯಾವ ವಿಚಾರಗಳನ್ನು ಪ್ರಸ್ತಾಪಿಸಬಹುದು ಎಂದು ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ.ತುಕಾರಾಮ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News