ಜಮ್ಮು-ಕಾಶ್ಮೀರ: ಹೆಲಿಕಾಪ್ಟರ್ ಪತನ, ಓರ್ವ ಸೇನಾ ಪೈಲಟ್ ಮೃತ್ಯು

Update: 2021-01-26 04:43 GMT

ಶ್ರೀನಗರ: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೋಮವಾರ ಪತನಗೊಂಡಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ಸೇನಾ ಪೈಲಟ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಧಾರಿತ ಹಗುರ ಹೆಲಿಕಾಪ್ಟರ್ ಧ್ರುವ್ ಪಂಜಾಬ್ ನ ಪಠಾಣ್ ಕೋಟ್ ನಿಂದ ಬಂದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಇನ್ನೋರ್ವ ಪೈಲಟ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೇನಾ ಹೆಲಿಕಾಪ್ಟರ್ ಕಥುವಾದ ಲಖನ್ ಪುರದಲ್ಲಿ ಪತನಗೊಂಡಿತ್ತು ಎಂದು ಪೊಲೀಸ್ ಅಧಿಕಾರಿ ಶೈಲೇಂದ್ರ ಮಿಶ್ರಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News