ದೇವಸ್ಥಾನದಲ್ಲಿ ಕಳವು ಪ್ರಕರಣ: ಇಬ್ಬರು ಆರೋಪಿಗಳು ವಶಕ್ಕೆ

Update: 2021-01-26 09:58 GMT

ಕೊಣಾಜೆ : ದೇರಳಕಟ್ಟೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎರಡು ವಾರದ ಹಿಂದೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣವು ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ದೇವಸ್ಥಾನದ ಆಡಳಿತ ಕಮಿಟಿ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಕೆ.ಸಿ ರೋಡ್ ಮೂಲದ ಮಹಮ್ಮದ್ ಅಶ್ರಫ್, ನಿಝಾಂ ಎಂಬವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News