ಪ್ರಧಾನಿ ರೈತರ ಆಕ್ರೋಶ ಸ್ಫೋಟಗೊಳ್ಳಲು ಅವಕಾಶ ನೀಡಬಾರದು: ಸಿದ್ದರಾಮಯ್ಯ

Update: 2021-01-26 14:14 GMT

ಬೆಂಗಳೂರು, ಜ.26: ರೈತ ಹೋರಾಟಗಾರರ ಆಕ್ರೋಶ ಸ್ಫೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ಮೋದಿ ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ಪರೇಡ್‌ಗೆ ಸಂಬಂಧಿಸಿದಂತೆ ಅಹಿತಕರ ಘಟನೆಗಳು ನಡೆದರೆ ಅದರ ಹೊಣೆಯನ್ನು ಮೋದಿ ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News