ಉಡುಪಿ ಜಿಲ್ಲೆಯ ಏಳು ಮಂದಿ ಕೋವಿಡ್‌ಗೆ ಪಾಸಿಟಿವ್

Update: 2021-01-26 14:15 GMT

ಉಡುಪಿ, ಜ. 26: ಜಿಲ್ಲೆಯ ಏಳು ಮಂದಿ ಮಂಗಳವಾರ ಕೋವಿಡ್-19ಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಏಳು ಮಂದಿ ಸೋಂಕಿನಿಂದ ಗುಣಮುಖ ರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 40ರಲ್ಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ನಾಲ್ವರು ಪುರುಷರಾದರೆ, ಉಳಿದ ಮೂವರು ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ ಒಬ್ಬರು, ಕುಂದಾಪುರ ತಾಲೂಕಿನ ಮೂವರು, ಕಾರ್ಕಳ ತಾಲೂಕಿನ ಒಬ್ಬರು ಹಾಗೂ ಹೊರಜಿಲ್ಲೆಯ ಇಬ್ಬರು ಸೇರಿದ್ದಾರೆ. ಸೋಮವಾರ ಏಳು ಮಂದಿ ಸೋಂಕಿನಿಂದ ಮುಕ್ತರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಗುಣಮುಖರಾದವರ ಒಟ್ಟು ಸಂಖ್ಯೆ ಈಗ 23,053ಕ್ಕೇರಿದೆ.

825 ಮಂದಿ ನೆಗೆಟಿವ್: ಸೋಮವಾರ ಜಿಲ್ಲೆಯ 835 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 825 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 10 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,282 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,30,542 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,07,260 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಹೀಗಾಗಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 189 ಮಾತ್ರ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಇಂದು ಜಿಲ್ಲೆಯಲ್ಲಿ ಯಾರಿಗೂ ಕೋವಿಡ್ ಲಸಿಕೆ ವಿತರಿಸಿಲ್ಲ ಎಂದು ಇಲಾಖೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News