ಮಂಗಳೂರು ಏರ್‌ಪೋರ್ಟ್‌ನಲ್ಲಿ 57 ಲಕ್ಷ ರೂ. ಮೌಲ್ಯದ ಚಿನ್ನ ವಶ, ಇಬ್ಬರು ಸೆರೆ

Update: 2021-01-26 15:49 GMT

ಮಂಗಳೂರು, ಜ. 26:  ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮಂಗಳವಾರ ಪತ್ತೆಯಾಗಿದೆ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಮೂಡುಬಿದಿರೆಯ ಮುಹಮ್ಮದ್ ಮನಾಝ್, ಕಾಸರಗೋಡಿನ ಕುಂಞಿ ಹಮೀದ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ದುಬೈನಿಂದ ಸ್ಪೈಸ್ ‌ಜೆಟ್ ವಿಮಾನದಲ್ಲಿ ಆಗಮಿಸಿದ ಇಬ್ಬರು ಪ್ರಯಾಣಿಕರು 57 ಲಕ್ಷ ರೂ. ಮೌಲ್ಯದ 1 ಕೆ.ಜಿ. 119 ಗ್ರಾಂ ತೂಕದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತಪಾಸಣೆ ವೇಳೆ ಪತ್ತೆಯಾಗಿದೆ.

ಚಿನ್ನವನ್ನು ಸ್ವಾಧೀನಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News