ರಾಜ್ಯದಲ್ಲಿ 529 ಕೊರೋನ ಪ್ರಕರಣಗಳು ದೃಢ: 4 ಮಂದಿ ಸಾವು

Update: 2021-01-26 16:27 GMT

ಬೆಂಗಳೂರು, ಜ.26: ರಾಜ್ಯದಲ್ಲಿ ಮಂಗಳವಾರ 529 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಇಬ್ಬರು, ಮೈಸೂರಿನಲ್ಲಿ ಇಬ್ಬರು ಸೇರಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. 738 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,36,955 ತಲುಪಿದ್ದು, 147 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,204ಕ್ಕೆ ತಲುಪಿದ್ದು, ಒಟ್ಟು ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 6,633ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 529 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 276, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 33, ಚಿಕ್ಕಮಗಳೂರು 5, ಚಿತ್ರದುರ್ಗ 11, ದಕ್ಷಿಣ ಕನ್ನಡ 19, ದಾವಣಗೆರೆ 5, ಧಾರವಾಡ 5, ಹಾಸನ 14, ಹಾವೇರಿ 2, ಕಲಬುರಗಿ 15, ಕೊಡಗು 6, ಕೋಲಾರ 2, ಮಂಡ್ಯ 8, ಮೈಸೂರು 26, ರಾಯಚೂರು 2, ರಾಮನಗರ 1, ಶಿವಮೊಗ್ಗ 5, ತುಮಕೂರು 36, ಉಡುಪಿ 7, ಉತ್ತರ ಕನ್ನಡ 16, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 276 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಮಂಗಳವಾರ 371 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 452 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 3,97,609 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,382 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,88,962 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News