ಸಚಿವ ಬಿ.ಸಿ.ಪಾಟೀಲ್ ರನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ದೂರು
Update: 2021-01-26 23:27 IST
ಬೆಂಗಳೂರು, ಜ.26: ರೈತರ ಕುರಿತು ಹಗುರವಾಗಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದರು.
ಮಂಗಳವಾರ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿಯ ಎಸ್.ಮನೋಹರ್ ಅವರು ದೂರು ಸಲ್ಲಿಸಿ, ರೈತರನ್ನು ಭಯೋತ್ಪಾದಕರು ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಈ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.