ಮಾಜಿ ಎಐಎಡಿಎಂಕೆ ನಾಯಕಿ ಶಶಿಕಲಾ ಜೈಲಿನಿಂದ ಬಿಡುಗಡೆ

Update: 2021-01-27 08:14 GMT

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ 4 ವರ್ಷ ಕಳೆದಿದ್ದ ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾರ ಆಪ್ತೆ ವಿ.ಕೆ. ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾದರು.

ಕೋವಿಡ್-19ಗೆ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಬೆಂಗಳೂರಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ. ಶಶಿಕಲಾ ರಾಜ್ಯದಲ್ಲಿ ಇರುವ ತನಕ ಕರ್ನಾಟಕ ಪೊಲೀಸರು ಅವರಿಗೆ ಭದ್ರತೆ ನೀಡಲಿದ್ದಾರೆ.

ಜೈಲು ಅಧಿಕಾರಿಗಳು ಪಿಪಿಇ ಕಿಟ್ ಗಳನ್ನು ಧರಿಸಿ ಎಲ್ಲ ಔಪಚಾರಿಕತೆ ಪೂರೈಸಿದ ಬಳಿಕ 66ರ ಹರೆಯದ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದರು.

ಶಶಿಕಲಾ ವಿಕ್ಟೋರಿಯ ಆಸ್ಪತ್ರೆಯಲ್ಲಿ ಇನ್ನೂ ನಾಲ್ಕೈದು ದಿನ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ತಿಳಿಸಿದ್ದಾರೆ.

ಶಶಿಕಲಾ ಅವರ ಬೆಂಬಲಿಗರು ವಿಕ್ಟೋರಿಯ ಆಸ್ಪತ್ರೆಯ ಹೊರಗಡೆ ಜಮಾಯಿಸಿ ಶಶಿಕಲಾ ಪರ ಘೋಷಣೆ ಕೂಗಿದರು. ತಮ್ಮ ನಾಯಕಿ ಬಿಡುಗಡೆಯಾದ ಸಂಭ್ರಮದಲ್ಲಿ ಸಿಹಿ ತಿಂಡಿ ಹಂಚಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News