ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದವ ಬಿಜೆಪಿ ಕಾರ್ಯಕರ್ತ: ಸಿದ್ದರಾಮಯ್ಯ ಆರೋಪ

Update: 2021-01-27 14:44 GMT

ಬೆಂಗಳೂರು, ಜ.27: ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆ ಸಮೇತ ಸಾಬೀತಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹೊಸದಿಲ್ಲಿಯಲ್ಲಿ ಜನವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮುದಾಯ ಒಕ್ಕೊರಲಿನಿಂದ ಹೋರಾಟ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಧರಣಿ ನಡೆಸುತ್ತಿದ್ದು, ನೆನ್ನೆ(ಜ.26) ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು. ರೈತರ ಈ ರ್ಯಾಲಿಯನ್ನು ವಿಫಲಗೊಳಿಸುವುದಕ್ಕಾಗಿ ಬಿಜೆಪಿ ಕಾರ್ಯಕರ್ತ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿ, ಅದನ್ನು ರೈತರ ತಲೆಗೆ ಕಟ್ಟಲು ಪ್ರಯತ್ನಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸದಿಲ್ಲಿಯಲ್ಲಿ ನಡೆದ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರೇ ಹಿಂಸೆಗೆ ಪ್ರಚೋದಿಸಿ, ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರಕಾರದ ಬಳಿ ಇದ್ದರೆ ಅವರನ್ನು ಮೊದಲೇ ಬಂಧಿಸಬೇಕಿತ್ತಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News