ಮಕ್ಕಳ ಹಕ್ಕುಗಳು, ರಕ್ಷಣೆ ಬಗ್ಗೆ ಅರಿವು ಕಾರ್ಯಯಕ್ರಮ

Update: 2021-01-27 15:00 GMT

ಉಡುಪಿ, ಜ.27: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಬಗ್ಗೆ ಅರಿವು ಕಾರ್ಯಯಕ್ರಮವನ್ನು ಚೇರ್ಕಾಡಿ ಶಾರದಾ ಪ್ರೌಢ ಶಾಲೆಯಲ್ಲಿ ಇಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ಶಾಲಾ ಮಕ್ಕಳಿಗೆ ಬಾಲಕಾರ್ಮಿಕ ಕಾಯ್ದೆ ಬಗ್ಗೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯ ವೈಖರಿ ಬಗ್ಗೆ ವಿವರಿಸಿದರು.ಪ್ರಭಾಕರ ಆಚಾರ್ ಕಾನೂನು ಪರಿವೀಕ್ಷಣಾಧಿಕಾರಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾದ್ಯಾಯ ಮಂಜುನಾಥ್ ನಾಯ್ಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಸಮಾಜ ಕಾರ್ಯಕರ್ತ ಯೋಗೀಶ್ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News