ಭಿನ್ನ ಸಾಮರ್ಥ್ಯರಿಗೆ ಸಹಾಯ ಯೋಜನೆ ಉದ್ಘಾಟನೆ

Update: 2021-01-27 16:51 GMT

ಮಂಗಳೂರು, ಜ.27: ಸಮಾಜದಲ್ಲಿ ಯುವಕರು ಮುಂದೆ ಬಂದು ಸಮಾಜಮುಖಿಯಾಗಿ ಕೆಲಸ ಮಾಡಲು ಮನಸ್ಸು ಮಾಡಬೇಕು. ಕೇವಲ ತನಗಾಗಿ ಬದುಕದೆ ಸರ್ವರ ಬಾಳಿನಲ್ಲಿ ಏಳಿಗೆಯನ್ನು ಬಯಸಿ ಬದುಕಿದಾಗ ಸಿಗುವ ತೃಪ್ತಿ ಯಾವಾಗಲು ಶ್ರೇಷ್ಠ ಎಂದು ಮುಂಬೈ ವಿ.ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಕೆ.ಎಂ. ಶೆಟ್ಟಿ ಮಧ್ಯಗುತ್ತು ತಿಳಿಸಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸುತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ. ಶೆಟ್ಟಿ ಸಭಾಭವನದಲ್ಲಿ ಜರುಗಿದ ಭಿನ್ನ ಸಾಮರ್ಥ್ಯರಿಗೆ ಸಹಾಯ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಮಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಡಾ. ಸಂಜೀವ ರೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 10 ಮಂದಿ ಭಿನ್ನ ಸಾಮರ್ಥ್ಯರಿಗೆ ಸಾಂಕೇತಿಕವಾಗಿ ಸಹಾಯಧನ ನೀಡಲಾಯಿತು. ಕಾರ್ಯಕ್ರಮದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ, ಗುರುಪುರ ಬಂಟರ ಮಾತೃ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜ್‌ಕುಮಾರ್ ಶೆಟ್ಟಿ, ಎಕ್ಕಾರ್ ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಜಪ್ಪು ಬಂಟರ ಸಂಘದ ಅಧ್ಯಕ್ಷ ರಾಜಕುಮಾರ್ ಶೆಟ್ಟಿ, ಜಯರಾಮ ಸಾಂತ, ವಸಂತ ಶೆಟ್ಟಿ, ಉಮೇಶ್ ಶೆಟ್ಟಿ ಪದವು ಮೇಗಿನ ಮನೆ, ಸವಿತಾ ಚೌಟ, ಡಾ ಆಶಾಜ್ಯೋತಿ ರೈ ಉಪಸ್ಥಿತರಿದ್ದರು.

ಸಹಾಯಧನ ಯೋಜನೆಯ ಸಂಚಾಲಕ ರವೀಂದ್ರನಾಥ ಎಸ್. ಶೆಟ್ಟಿ ಸ್ವಾಗತಿಸಿದರು. ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್.ಶೆಟ್ಟಿ ಪೆರ್ಮುದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಸಂಚಾಲಕ ಎನ್. ಮುರಳೀಧರ ಶೆಟ್ಟಿ ವಂದಿಸಿದರು. ಸುಖೇಶ್ ಚೌಟ ಉಳ್ಳಾಲಗುತ್ತು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News