ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Update: 2021-01-28 07:47 GMT

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬುಧವಾರ ತಡ ರಾತ್ರಿ ಬೆಳಗಾವಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.

ಮೃತರನ್ನು ರಾಯಬಾಗ, ಭಿರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ (60), ಅವರ ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಎಂದು ಗುರುತಿಸಲಾಗಿದೆ.

ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News