ರೈತರ ಪ್ರತಿಭಟನೆಗೆ ಬೆಂಬಲ: ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಿದ ವಿರೋಧ ಪಕ್ಷಗಳು

Update: 2021-01-28 09:38 GMT

ಹೊಸದಿಲ್ಲಿ,ಜ.28: ಕೇಂದ್ರ ಸರಕಾರವು ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಜನವರಿ 29ರಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಪಾರ್ಲಿಮೆಂಟ್‌ ನಲ್ಲಿ ನಡೆಸಲಿರುವ ಭಾಷಣವನ್ನು ಬಹಿಷ್ಕರಿಸುವುದಾಗಿ 16 ವಿರೋಧ ಪಕ್ಷಗಳು ಜಂಟಿ ಹೇಳಿಕೆ ನೀಡಿವೆ ಎಂದು ತಿಳಿದು ಬಂದಿದೆ.

"ನಾವು ಹಲವಾರು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರ ನಿಲ್ಲುತ್ತಿದ್ದೇವೆ. ಅವರೊಂದಿಗೆ ಕೈಜೋಡಿಸುತ್ತಿದ್ದೇವೆ. ಮೂರು ವಿವಾದಾತ್ಮಕ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು. ಬಲವಂತವಾಗಿ ಈ ಕಾಯ್ದೆಯನ್ನು ತರುವ ಮೂಲಕ ದೇಶದ ಜನರಿಗೆ ಮತ್ತು ರೈತರಿಗೆ ಅನ್ಯಾಯವೆಸಗಲಾಗುತ್ತಿದೆ. ಇದು ಸಂವಿಧಾನದ ಮೂಲಭೂತ ಹಕ್ಕುಗಳಿಗೆ ಮಾಡುವ ಅವಮಾನವಾಗಿದೆ ಎಂದು ವಿರೋಧ ಪಕ್ಷಗಳು ಹೇಳಿಕೆ ನೀಡಿವೆ ಎಂದು indianexpress.com ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News