ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಜೂ.14ರಿಂದ 25ರವರೆಗೆ ಪರೀಕ್ಷೆ

Update: 2021-01-28 14:16 GMT

ಬೆಂಗಳೂರು, ಜ.28: ಪ್ರಸಕ್ತ ಶೈಕ್ಷಣಿಕ ಸಾಲಿನ(2020-21ನೇ) ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂ.14ರಿಂದ 25ರವರೆಗೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ ಅವರು, ಸದರಿ ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಫೆ.26ರವರಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುತ್ತಿದೆ. ಅಂಧ, ಕಿವುಡ ಮತ್ತು ಮೂಗ ಹಾಗೂ ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜತೆಗೆ 1 ಗಂಟೆ ಹೆಚ್ಚಿನ ಸಮಯವನ್ನು ನೀಡಲಾಗುತ್ತಿದೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ಎಸೆಸೆಲ್ಸಿ ವೇಳಾಪಟ್ಟಿ

►ಜೂ.14-ಪ್ರಥಮ ಭಾಷೆ(ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
►ಜೂ.16-ಗಣಿತ, ಸಮಾಜಶಾಸ್ತ್ರ
►ಜೂ.18-ದ್ವಿತೀಯ ಭಾಷೆ(ಇಂಗ್ಲಿಷ್, ಕನ್ನಡ)
►ಜೂ.19-ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಎಂಜಿನಿಯರಿಂಗ್-2, ಎಂಜಿನಿಯರಿಗ್ ಗ್ರಾಫಿಕ್ಸ್-2, ಎಲೆಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಅರ್ಥಶಾಸ್ತ್ರ
►ಜೂ.21-ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
►ಜೂ.23-ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್.ಎಸ್.ಕ್ಯೂಎಫ್ ಪರೀಕ್ಷಾ ವಿಷಯಗಳು)
► ಜೂ.25-ಸಮಾಜ ವಿಜ್ಞಾನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News