ಜ.31: ಸಚಿವ ಕೆ.ಎಸ್. ಈಶ್ವರಪ್ಪ ದ.ಕ. ಜಿಲ್ಲಾ ಪ್ರವಾಸ

Update: 2021-01-28 15:41 GMT

ಮಂಗಳೂರು, ಜ.28: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಜ.31ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.31ರಂದು ಬೆಳಗ್ಗೆ 10:30ಕ್ಕೆ ಬಂಟ್ವಾಳ ತಾಲೂಕಿನ ಸ್ಪರ್ಶ ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ಕಡಬ ತಾಲೂಕಿನ ಕೊಂಬಾರು ಗ್ರಾಮಕ್ಕೆ ಭೇಟಿ ನೀಡಿ, ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2:30ಕ್ಕೆ ಧರ್ಮಸ್ಥಳಕ್ಕೆ ತೆರಳುವರು. ಮಧ್ಯಾಹ್ನ 3:40ಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಗ್ರಾಪಂ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾ ಗಿರುವ ಗ್ರಾಪಂ ಸದಸ್ಯರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News