ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರವಾಸ

Update: 2021-01-28 15:48 GMT

ಮಂಗಳೂರು, ಜ.28: ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪಸವದಿ ಜ.30 ಹಾಗೂ 31ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.30ರಂದು ಪೂ.11:30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 1:30ಕ್ಕೆ ಪಜೀರು ಗ್ರಾಮದ ಕೆಐಎಡಿಬಿ ಕಂಬ್ಲಪದವು ಹತ್ತಿರ ಸಾರಿಗೆ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಭಾರಿ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಸಂಜೆ 4:15ಕ್ಕೆ ನಗರದ ಕದ್ರಿ ಸರ್ಕ್ಯೂಟ್ ಹೌಸ್‌ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು/ಪುತ್ತೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. 7:30ಕ್ಕೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯ ಹೊಕ್ಕಾಡಿಗೋಳಿಯಲ್ಲಿ ಕಂಬಳ ಉತ್ಸವ ದಲ್ಲಿ ಪಾಲ್ಗೊಂಡು ರಾತ್ರಿ 10ಕ್ಕೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜ.31ರಂದು ಬೆಳಗ್ಗೆ 9ಕ್ಕೆ ಮಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News