ಚೆಕ್ ಬೌನ್ಸ್ ಪ್ರಕರಣ: ಕಾಫಿ ಡೇ ಸಿದ್ದಾರ್ಥ್ ಪತ್ನಿ ಮಾಳವಿಕಾ ಹೆಗ್ಡೆಗೆ ಜಾಮೀನು

Update: 2021-01-28 15:49 GMT

ಬೆಂಗಳೂರು, ಜ.28: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಕಾಫಿ ಡೇ ಸಿದ್ದಾರ್ಥ್ ಪತ್ನಿ ಮಾಳವಿಕಾ ಹೆಗ್ಡೆ ಅವರಿಗೆ ಬೆಂಗಳೂರಿನ 26ನೆ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. 

ಕಾಫಿ ಡೇ ಮಾಲಕ ಸಿದ್ದಾರ್ಥ್ ಅವರ ಪತ್ನಿ ಮಾಳವಿಕಾ ಅವರ ಮೇಲೆ ಲಕ್ಷ್ಮೀ ವಿಲಾಸ್ ಬ್ಯಾಂಕಿನ ನಾಲ್ಕು ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. 
ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ಮಾಳವಿಕಾ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News