ರಾಜ್ಯದಲ್ಲಿ 550 ಹೊಸ ಕೊರೋನ ಪ್ರಕರಣ ದೃಢ, ಇಬ್ಬರು ಮೃತ್ಯು

Update: 2021-01-28 16:20 GMT

ಬೆಂಗಳೂರು, ಜ.28: ರಾಜ್ಯದಲ್ಲಿ ಗುರುವಾರ 550 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 2 ಜನರು ಸೋಂಕಿಗೆ ಬಲಿಯಾಗಿದ್ದು, 644 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,37,933ಕ್ಕೆ ತಲುಪಿದ್ದು, 150 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,209ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,202ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರು ಸೋಂಕಿತರು ಬಲಿ: ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 550 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 4, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 311, ಬೀದರ್ 5, ಚಾಮರಾಜನಗರ 5, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 2, ಚಿತ್ರದುರ್ಗ 15, ದಕ್ಷಿಣ ಕನ್ನಡ 34, ದಾವಣಗೆರೆ 3, ಧಾರವಾಡ 5, ಹಾಸನ 12, ಕಲಬುರಗಿ 16, ಕೊಡಗು 22, ಕೋಲಾರ 9, ಮಂಡ್ಯ 4, ಮೈಸೂರು 19, ರಾಮನಗರ 2, ಶಿವಮೊಗ್ಗ 10, ತುಮಕೂರು 18, ಉಡುಪಿ 13, ಉತ್ತರ ಕನ್ನಡ 9, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News