ಕ್ಷಯ ರೋಗ ಔಷಧಿ ವಿತರಣೆ ಕುರಿತು ಮಾಹಿತಿ ಕಾರ್ಯಾಗಾರ
ಕಾರ್ಕಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕೇಂದ್ರ, ಸಹಾಯಕ ಔಷಧ ನಿಯಂತ್ರಣ ಇಲಾಖೆ, ಕಾರ್ಕಳ ಖಾಸಗಿ ಔಷಧ ವ್ಯಾಪಾರಸ್ಥರ ಸಂಘ ಇವುಗಳ ಸಹಯೋಗದೊಂದಿಗೆ ಜ. 27ರಂದು ತೆಳ್ಳಾರು ಕಸ್ತೂರಿ ಸಭಾಭವನದಲ್ಲಿ ಕ್ಷಯ ರೋಗಕ್ಕೆ ಸಂಬಂಧಿಸಿದಂತೆ ಔಷಧ ವಿತರಣೆ ಕುರಿತು ತರಬೇತಿ ಕಾರ್ಯಗಾರ ನಡೆಯಿತು.
ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ. ಚಿದಾನಂದ್ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಮಾತನಾಡಿ, ಸರಕಾರಿ ವ್ಯವಸ್ಥೆಯೊಂದಿಗೆ ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಕಾರ್ಕಳದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ. ಕ್ಷಯರೋಗ ನಿರ್ಮೂಲನೆ ಮಾಡುವಲ್ಲೂ ಖಾಸಗಿ ಸಹಬಾಗಿತ್ವದ ಅವಶ್ಯವಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಚಿದಾನಂದ ಸಂಜು ಕ್ಷಯರೋಗದ ಲಕ್ಷಣ, ಹರಡುವ ಬಗೆ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು. ಕಾರ್ಕಳ ಔಷಧ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಔಷಧ ನಿಯಂತ್ರಕ ಕೆ.ವಿ. ನಾಗರಾಜ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ್ ಕೆ. ಸಾಲಿಗ್ರಾಮ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೆ. ಅರವಿಂದ್ ರಾವ್ ವಂದಿಸಿದರು.