×
Ad

ಕಣ್ಣೀರಿಟ್ಟ ರೈತ ಮುಖಂಡ‌ ರಾಕೇಶ್ ಟಿಕಾಯತ್ : ರಾತ್ರೋರಾತ್ರಿ ಸಾವಿರಾರು ಸಂಖ್ಯೆಯಲ್ಲಿ ಹೊರಟ ಜನರು

Update: 2021-01-29 10:14 IST

ಹೊಸದಿಲ್ಲಿ : ಬಿಜೆಪಿಗರು ರೈತರನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕಣ್ಣೀರಿಟ್ಟ ಬಳಿಕ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹರ್ಯಾಣ , ಉತ್ತರ ಪ್ರದೇಶದ ಸಾವಿರಾರು ರೈತರು ರಾತ್ರೋರಾತ್ರಿ ಗಾಝಿಯಾಬಾದ್ ಕಡೆಗೆ ಹೊರಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ಹರಿದಾಡುತ್ತಿವೆ. 

ನಾವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಆದರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಟಿಕಾಯತ್ ಹೇಳಿಕೆ ನೀಡಿದ್ದರು‌. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಕಣ್ಣೀರಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದ್ದಕ್ಕಿದ್ದಂತೆ ಈ ಎರಡೂ ರಾಜ್ಯಗಳ ಜನರು ಸಾವಿರಾರು ಸಂಖ್ಯೆಯಲ್ಲಿ ಗಾಝಿಯಾಬಾದ್ ಗೆ ಆಗಮಿಸುತ್ತಿದ್ದಾರೆ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

ಇನ್ನು ಈ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಶುಕ್ರವಾರ ಮುಝಫ್ಫರ್ ನಗರದಲ್ಲಿ ಮಹಾಪಂಚಾಯತ್ ಗೆ ರೈತ ಸಂಘಟನೆ ಗಳು ಕರೆ ನೀಡಿವೆ ಎಂದು ವರದಿಯಾಗಿದೆ‌. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಾಗಿದೆ‌.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News