×
Ad

ಕುಡಿಯುವ ನೀರಿನ ಸಮಸ್ಯೆ: ಪೌರಾಯುಕ್ತರಿಗೆ ಮನವಿ

Update: 2021-01-29 17:27 IST

ಉಡುಪಿ, ಜ.29: ಬೈಲೂರು 31ನೆ ವಾರ್ಡ್‌ನಲ್ಲಿನ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿ ಸ್ಥಳೀಯರು ಇಂದು ಉಡುಪಿ ನಗರಸಭೆ ಪೌರಾಯುಕ್ತ ಉದಯ್ ಕುಾರ್ ಅವರಿಗೆ ಮನವಿ ಸಲ್ಲಿಸಿದರು.

ಉಡುಪಿ ನಗರಸಭೆ ವ್ಯಾಪ್ತಿಯ ಬೈಲೂರು ವಾರ್ಡಿನ ನಾಗರಿಕರು ಕಳೆದ ಒಂದು ವರ್ಷದಿಂದಲೂ ನೀರಿನ ಸಮಸ್ಯೆ ಎದುರಿಸುತ್ತಿ ದ್ದಾರೆ. ಬಜೆ ಅಣೆ ಕಟ್ಟಿನಲ್ಲಿ ಸಾಕಷ್ಟು ನೀರಿದ್ದರೂ ಬೈಲೂರು ವಾರ್ಡಿನಲ್ಲಿ ನೀರಿಲ್ಲ. ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ಹಲವರು ತಂದರೂ ಪ್ರಯೋಜನವಾಗಿಲ್ಲ ಎಂದು ಮನವಿಯಲ್ಲಿ ದೂರಲಾಗಿದೆ.

ಕಳೆದ ಒಂದು ತಿಂಗಳಿನಿಂದ ನೀರಿನ ಸಮಸ್ಯೆ ಇನ್ನಷ್ಟು ಹೆಚ್ಚಾಗಿದೆ. ಬಾವಿ ಯಿಂದ ಪ್ರತಿದಿನ ನೀರು ತರುವುದು ಕಷ್ಟಕರ ವಾಗಿರುದರಿಂದ ಈ ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ವಾರ್ಡ್‌ನ ನಗರಸಭಾ ಸದಸ್ಯ ರಮೇಶ್ ಕಾಂಚನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಪೌರಾಯುಕ್ತರು ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News