ಶಿರಸಿ: ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರ ಬಂಧನ

Update: 2021-01-29 14:56 GMT

ಶಿರಸಿ : ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಖುಲ್ಲಾ ಜಾಗದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದಡಿ ಶಿರಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.

ಬಂಧಿತರನ್ನು ಮುಹ್ಸಿನ್ ಹಾಗೂ ಶಿರಸಿ ವಿದ್ಯಾನಗರದ ಮಂಜುನಾಥ್ ಪೂಜಾರಿ ಎಂದು ಗುರುತಿಸಲಾಗಿದೆ. 

ಆರೋಪಿತರನ್ನು ವಶಕ್ಕೆ ಪಡೆದು ಸೊತ್ತು ಹಾಗು ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News