ವಿವಿಧ ಯೋಜನೆ ಅಡಿಯಲ್ಲಿ ಆರ್ಥಿಕ ಸೌಲಭ್ಯ: ಅರ್ಜಿ ಆಹ್ವಾನ
ಬೆಂಗಳೂರು, ಜ. 29: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಕಿರುಸಾಲ ಯೋಜನೆ, ಸಮೃದ್ಧಿ ಯೋಜನೆ, ಚೇತನ ಯೋಜನೆ ಮತ್ತು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಆರ್ಥಿಕ ಸೌಲಭ್ಯವನ್ನು ನೀಡಲು ಅರ್ಹ ಎಸ್ಸಿ-ಎಸ್ಟಿ ವರ್ಗದ ಮಹಿಳೆಯರಿಂದ ಹಾಗೂ ಸ್ತ್ರೀಶಕ್ತಿ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫೆ.3ರೊಳಗೆ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು (ದ್ವಿಪ್ರತಿಗಳಲ್ಲಿ) ಫೆ.10ರ ಸಂಜೆ 5:30ರ ಒಳಗಾಗಿ (ಸರಕಾರಿ ರಜೆ ದಿನಗಳನ್ನು ಹೊರತುಪಡಿಸಿ) ಸದರಿ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ ಹಾಗೂ ಸದರಿ ದಿನಾಂಕದ ನಂತರ ಬರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು-29, ದೂ.ಸಂಖ್ಯೆ 080-26578688ಕ್ಕೆ ಸಂಪರ್ಕಿಸಬಹುದು ಎಂದು ಕೋರಲಾಗಿದೆ.