ಶಶಿಕಲಾ ಆರೋಗ್ಯ ಸ್ಥಿರ: ನಾಳೆ ಬಿಡುಗಡೆ ಸಾಧ್ಯತೆ

Update: 2021-01-29 17:25 GMT

ಬೆಂಗಳೂರು, ಜ.29: ಕೊರೋನ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು(ಜ.30) ಬಿಡುಗಡೆಯಾಗುವ ಸಾಧ್ಯತೆ ಇದೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ಆರ್‍ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇನ್ನು, ಶನಿವಾರ ವೈದ್ಯಕೀಯ ವರದಿ ಹೊರಬೀಳಲಿದ್ದು, ಆನಂತರ ಅವರನ್ನು ಮನೆಗೆ ಕಳುಹಿಸಿಕೊಡಲಾಗುವುದು ಎಂದು ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ 4 ವರ್ಷಗಳ ಕಾಲ ಶಶಿಕಲಾ ಅವರು ಜೈಲುವಾಸ ಅನುಭವಿಸಿದ್ದು, ಜ.27ರಂದು ಬಿಡುಗಡೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News