×
Ad

ಖಾಸಗಿ ಗೋದಾಮಿನಲ್ಲಿ ಆಹಾರ ಧಾನ್ಯ ಶೇಖರಣೆ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ: ಉಮೇಶ್ ಕತ್ತಿ

Update: 2021-01-29 23:24 IST

ಬೆಂಗಳೂರು, ಜ. 29: ಸರಕಾರಿ ಗೋದಾಮುಗಳಿದ್ದರೂ ಖಾಸಗಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳನ್ನು ಶೇಖರಣೆ ಮಾಡುವ ಮೂಲಕ ಸರಕಾರಕ್ಕೆ ನಷ್ಟ ಉಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಹಾಲಪ್ಪ ಆಚಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಸರಕಾರಿ ಗೋದಾಮು ಲಭ್ಯವಿರುವ ಕಡೆಗಳಲ್ಲಿ ಆಹಾರ ಧಾನ್ಯಗಳನ್ನು ದಾಸ್ತಾನು ಮಾಡಬೇಕು. ಖಾಸಗಿ ಗೋದಾಮುಗಳನ್ನು ಅಗತ್ಯವಿದ್ದರೆ ಮಾತ್ರವೇ ಬಳಕೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಹಾಲಪ್ಪ ಆಚಾರ್, ರಾಜ್ಯದಲ್ಲಿ ಸರಕಾರಿ ಗೋದಾಮು ಲಭ್ಯವಿದ್ದರೂ ಅಧಿಕಾರಿಗಳು ಖಾಸಗಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳನ್ನು ದಾಸ್ತಾನು ಮಾಡುವ ಮೂಲಕ ಕಳ್ಳಸಾಗಾಣೆ ಮತ್ತು ಸರಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡುತ್ತಿದ್ದಾರೆ ಎಂದು ಸರಕಾರದ ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News