ಕೊರೋನ ಲಸಿಕೆ ಮೊದಲ ಡೋಸ್ ಪಡೆದ 45 ದಿನಗಳ ಬಳಿಕವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ: ಸಚಿವ ಡಾ.ಸುಧಾಕರ್
ಬೆಂಗಳೂರು, ಜ.30: ಕೊರೋನ ಲಸಿಕೆ ಮೊದಲ ಡೋಸ್ ಪಡೆದ 45 ದಿನಗಳ ಬಳಿಕವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೊರೋನ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದ್ದು, ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ”
“ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಕೊರೋನ ಲಸಿಕೆಯ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ” ಎಂದವರು ಟ್ವೀಟ್ ಮಾಡಿದ್ದಾರೆ.
ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದ್ದು, ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. (1/2)
— Dr Sudhakar K (@mla_sudhakar) January 30, 2021