ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ, ಎಐಎಡಿಎಂಕೆ ಒಟ್ಟಿಗೆ ಸ್ಪರ್ಧಿಸಲಿವೆ: ಜೆ.ಪಿ.ನಡ್ಡಾ

Update: 2021-01-30 18:18 GMT

ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಹಾಗೂ ಬಿಜೆಪಿ ರಾಜ್ಯ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಲಿವೆ ಎಂದು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮದುರೈನಲ್ಲಿ ಇಂದು ನಡೆದ ರ್ಯಾಲಿಯೊಂದರಲ್ಲಿ ಪ್ರಕಟಿಸಿದರು.

ಬಿಜೆಪಿ ಇದೇ ಮೊದಲ ಬಾರಿ ಎಐಎಡಿಎಂಕೆಯ ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಕಳೆದ ವರ್ಷದ ನವೆಂಬರ್  ನಲ್ಲಿ ತಮಿಳುನಾಡಿನ ಪ್ರಾದೇಶಿಕ ಪಕ್ಷ ಎಐಎಡಿಎಂಕೆ, ಬಿಜೆಪಿಯೊಂದಿಗೆ ಮೈತ್ರಿಮಾಡಿಕೊಳ್ಳುವುದಾಗಿ ಘೋಷಿಸಿತ್ತು.

ಬಿಜೆಪಿ ಹಾಗೂ ಎಐಎಡಿಎಂಕೆ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದವು. ಆದರೆ, ಮೈತ್ರಿಕೂಟ ಹೆಚ್ಚು ಸ್ಥಾನ ಗೆಲ್ಲಲು ವಿಫಲವಾಗಿತ್ತು. 9ಕ್ಕೂ ಅಧಿಕ ವರ್ಷಗಳಿಂದ ಅಧಿಕಾರದಲ್ಲಿರುವ ಎಐಎಡಿಎಂಕೆ ಎದುರಾಳಿ ಡಿಎಂಕೆಯನ್ನು ಸೋಲಿಸಿ ಮತ್ತೊಮ್ಮೆ ಗೆಲುವು ದಾಖಲಿಸಲು ಎದುರು ನೋಡುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News